ಬಂಟ್ವಾಳ: ಕ್ರಿಕೆಟ್ ಆಡುತ್ತಿರುವಾಗ ಮೈದಾನದಲ್ಲೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಕ್ಯಪದವಿನಲ್ಲಿ ಸಂಭವಿಸಿದೆ.
ಮೃತರನ್ನು ಅನ್ನಡ್ಕ ನಿವಾಸಿ ಮನೋಹರ್ ಪ್ರಭು (45) ಎನ್ನಲಾಗಿದೆ.
ಕಕ್ಯಪದವಿನ ಕಾಲೇಜು ಮೈದಾನದಲ್ಲಿ ಕ್ರಿಕೆಟ್ ನಡೆಯುತ್ತಿರುವಾಗ ಮನೋಹರ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.
ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಉತ್ತಮ ಕ್ರಿಕೆಟ್ ಆಟಗಾರರಾಗಿದ್ದರು.
ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.


























