ಪುತ್ತೂರು: ಕುಂದಾಪುರ ಉಪವಲಯ ಅರಣ್ಯಾಧಿಕಾರಿ ಹಸ್ತಾ ಶೆಟ್ಟಿಯವರು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೇರ ನೇಮಕಾತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ‍್ಯಾಂಕ್ ಪಡೆದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.
ಹಸ್ತಾ ರವರು ಒಳಮೊಗ್ರು ಗ್ರಾಮದ ಮುಡಾಲ ನಿವಾಸಿ, ಕಟ್ಟಡ ಕಾರ್ಮಿಕರ ಸಂಘದ ಕುಂಬ್ರ ವಲಯ ಅಧ್ಯಕ್ಷ ಪುರಂದರ ಶೆಟ್ಟಿ ಮುಡಾಲ ಮತ್ತು ವಾರಿಜಾಕ್ಷಿ ಪಿ. ಶೆಟ್ಟಿಯವರ ಪುತ್ರಿಯಾಗಿದ್ದು, ಬಿಎಸ್ಪಿ ಪದವಿ ಪಡೆದುಕೊಂಡ ಬಳಿಕ ಕಳೆದ 1 ವರ್ಷಗಳಿಂದ ಕುಂದಾಪುರ ವಲಯ ಅರಣ್ಯಾಧಿಕಾರಿ ಕಛೇರಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.


























