ಉಡುಪಿ : ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಇಂದು ಮುಂಜಾನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಮೇಶ್ವರ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾವೇರಿ ಮೂಲದ ರಮೇಶ್ ಎಂಬವರು ಹಿರಿಯಡ್ಕದಲ್ಲಿ ಪೂಜೆ ಕಾರ್ಯಕ್ರಮ ಮುಗಿಸಿ ಇಂದು ಮುಂಜಾನೆ ತನ್ನ ಮಾರುತಿ ಆಲ್ಟೋ ಕಾರಿನಲ್ಲಿ ಮನೆಗೆ ವಾಪಾಸುಗುತ್ತಿದ್ದರು ಈ ಸಂದರ್ಭ ಚಲಿಸುತ್ತಿದ್ದ ಕಾರಿನಲ್ಲಿ ಏಕಾಎಕಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಹೊಗೆ ಗಮನಿಸಿದ ಅವರು ತಕ್ಷಣ ಅವರು ಕಾರಿನಿಂದ ಕೆಳಗಿದು ಬಚಾವ್ ಆಗಿದ್ದಾರೆ.
ಸ್ಥಳಕ್ಕಾಗಮಿಸಿದ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಶಾರ್ಟ್ ಸರ್ಕಿಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.