ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯೊಡೆದ ಘಟನೆ ವಿಟ್ಲ ಕೋಟಿಕೆರೆ ಬಳಿ ನಡೆದಿದೆ.
ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿಯೊಡೆದಿದ್ದು, ಅಪಘಾತದಿಂದಾಗಿ ಕಾರಿನಲ್ಲಿದ್ದ ಕೇರಳ ಮೂಲದ ಇಬ್ಬರು ಗಾಯಗೊಂಡಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.