ಮಂಗಳೂರು: ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ ನ ಅಪಾರ್ಟ್ಮೆಂಟ್ ವೊಂದರ ಫ್ಲಾಟ್ ವೊಂದರಲ್ಲಿ ಗ್ರಾಹಕರಿಗೆ ವೇಶ್ಯಾವಾಟಿಕೆ ದಂಧೆಗೆ ಯುವತಿಯರನ್ನು ಹಾಗೂ ಮಹಿಳೆಯರನ್ನು ಒದಗಿಸುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಪಿಂಪ್ ಗಳನ್ನು ವಶಕ್ಕೆ ಪಡೆದುಕೊಂಡು 4 ಮಂದಿ ಯುವತಿಯರನ್ನು ರಕ್ಷಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ವಿಟ್ಲಪಡ್ನೂರು ಪರ್ತಿಪಾಡಿಯ ಕೆ.ಪಿ. ಹಮೀದ್(54) ಆಕಾಶ ಭವನ ಬಳಿಯ ಅನುಪಮ ಶೆಟ್ಟಿ(46),
ವಾಸುಕಿ ನಗರ, ನಾಗಬ್ರಹ್ಮ ಎಕ್ಕೂರಿನ ನಿಶ್ಮಿತ(23) ಎನ್ನಲಾಗಿದೆ.
ಮಾ.01 ರಂದು ಮಂಗಳೂರು ನಗರದ ಪೂರ್ವ( ಕದ್ರಿ ) ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ 3 ನೇ ಕ್ರಾಸ್ ರಸ್ತೆಯಲ್ಲಿರುವ PEEBI ರೆಸಿಡೆನ್ಸಿ ಎಂಬ ಆಪಾರ್ಟ್ ಮೆಂಟ್ ನ 2 ನೇ ಮಹಡಿಯ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರವರ ನೇತೃತ್ವದ ತಂಡ ದಾಳಿ ನಡೆಸಿ ಅಕ್ರಮವಾಗಿ ಲಾಭ ಗಳಿಸುವ ಉದ್ದೇಶದಿಂದ ಹುಡುಗಿಯರನ್ನು ತರಿಸಿಕೊಂಡು ಅನೈತಿಕ ಚಟುವಟಿಕೆ ದಂಧೆಯನ್ನು ನಡೆಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳಿಂದ 5 ಮೊಬೈಲ್ ಫೋನ್ ಗಳು ಹಾಗೂ 50,000/- ನಗದು, ಮಾರುತಿ 800 ಕಾರನ್ನು ವಶಪಡಿಸಿಕೊಂಡಿದ್ದು, 4 ಯುವತಿಯರನ್ನು ರಕ್ಷಿಸಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.