ಅಹಮದಾನಗರ : ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ದಿಲೀಪ್ ಕುಮಾರ್ ಗಾಂಧಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ದಿಲೀಪ್ ಕುಮಾರ್ ಗಾಂಧಿ ಅವರು ಅಹಮದಾನಗರ್ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದರು. ಒಂದು ಬಾರಿ ಕೇಂದ್ರದ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.