ಉಪ್ಪಿನಂಗಡಿ: ಮನೆಯೊಂದಕ್ಕೆ ಕಳ್ಳರು ನುಗ್ಗಿ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 42 ಸಾವಿರ ನಗದು ದೋಚಿರುವ ಘಟನೆ ಮಾ. 3ರ ರಾತ್ರಿ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಸಂಭವಿಸಿದೆ.
ಗಂಡಿಬಾಗಿಲು ಮಸೀದಿ ಬಳಿ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಕಪಾಟಿನಲ್ಲಿ ಇದ್ದ 14 ಪವನ್ ಚಿನ್ನಾಭರಣ ಮತ್ತು ನಗದನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.
ಮಾ. 3ರ ರಾತ್ರಿ ಆತೂರು ಮಸೀದಿಯಲ್ಲಿ ದಿಕ್ರ್ ಹಲ್ಕಾ ಕಾರ್ಯಕ್ರಮ ಇದ್ದುದರಿಂದ ಮನೆಯವರು ಸಂಜೆ ಹೊತ್ತಿಗೆ ಮನೆಗೆ ಬೀಗ ಹಾಕಿ ಹೋಗಿದ್ದು, ಕಾರ್ಯಕ್ರಮ ಮುಗಿದ ಬಳಿಕ ರಾತ್ರಿ ಹೊತ್ತಿಗೆ ಮರಳಿ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಾನಾ ಪಿ. ಕುಮಾರ್ , ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಕಡಬ ಠಾಣೆಯಲ್ಲಿ ಅಕ್ರ ನಂಬ್ರ: 18/2022 ಕಲಂ : 454.457.380 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.



























