ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರುಗದ್ದೆಯಲ್ಲಿ ನಡೆಯುವ ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆಯನ್ನು ಮಾ.4 ರಂದು ಬಿಡುಗಡೆ ಮಾಡಲಾಯಿತು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಈ ವೇಳೆ ದೇವರ ಮಾರುಗದ್ದೆಯ ಬಳಿ ನೂತನವಾಗಿ ನಿರ್ಮಿಸಿದ ನೀರಿನ ಟ್ಯಾಂಕ್ ಅನ್ನು ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಂಬಳ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಇದೇ ಮಾ.19-20 ರಂದು ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳ ನಡೆಯಲಿದೆ.































