ವಿಟ್ಲ: ಹಿಂದಿನಿಂದ ಬಂದ ಟ್ರ್ಯಾಕ್ಟರ್ ಆಕ್ಟಿವಾಕ್ಕೆ ಡಿಕ್ಕಿ ಹೊಡೆದಿದ್ದು, ಆಕ್ಟಿವಾ ಮುಂದಿನ ಟಿಪ್ಪರ್ ಗೆ ಡಿಕ್ಕಿ ಹೊಡೆದು, ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ನಾಲ್ಕುಮಾರ್ಗದಲ್ಲಿ ನಡೆದಿದೆ.
ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.