ಪುತ್ತೂರು: ವಿದ್ಯುತ್ ಕಂಬಕ್ಕೆ ನ್ಯಾನೋ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ.
ಸುಳ್ಯ ಈಶ್ವರಮಂಗಲ ನಿವಾಸಿ ದೇವಿ ಎಂಬವರು ಗಂಭೀರ ಗಾಯಗೊಂಡ ಕಾರು ಚಾಲಕ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದಾಗ ಬಂಟ್ವಾಳದ ಮಿತ್ತೂರು ಬಳಿ ಅಪಘಾತ ಸಂಭವಿಸಿದ್ದು, ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.