ಹೈದರಾಬಾದ್: ಪಂಚ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ, ಪಂಜಾಬ್, ಗೋವಾ ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳನ್ನು ಸಿಬ್ಬಂದಿ ಎಣಿಕೆ ಮಾಡುತ್ತಿದ್ದಾರೆ.
ಉತ್ತರ ಪ್ರದೇಶದಲ್ಲಿ 403 ಕ್ಷೇತ್ರಗಳ ಪೈಕಿ ಬಿಜೆಪಿ ಆರಂಭಿಕ ಮುನ್ನಡೆ ಪಡೆದುಕೊಂಡಿದ್ದು, ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಮೂರನೇ ಸ್ಥಾನದಲ್ಲಿದೆ. ಉತ್ತರಾಖಂಡದಲ್ಲಿ ಬಿಜೆಪಿ 6, ಕಾಂಗ್ರೆಸ್ 10 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.
ಪಂಜಾಬ್ ಹಾಗೂ ಗೋವಾದಲ್ಲಿ ಕಾಂಗ್ರೆಸ್, ಎಎಪಿ ತೀವ್ರ ಹಣಾಹಣಿ ಇದೆ. ಗೋವಾದಲ್ಲಿ ಮಣಿಪುರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮತ ಎಣಿಕೆಗೂ ಮುನ್ನವೇ ಪಂಜಾಬ್ನಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ಮಾಡಲಾಗುತ್ತಿದ್ದು, ಪಂಜಾಬ್‌ನ AAP ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಮನೆಯಲ್ಲಿ ಸಿಹಿ ತಯಾರಿ ಮಾಡಲಾಗ್ತಿದೆ. ಇನ್ನು ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಗುರುದ್ವಾರಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಉತ್ತರ ಪ್ರದೇಶದಲ್ಲಿ 403, ಪಂಜಾಬ್ 117, ಉತ್ತರಾಖಂಡ್ 70, ಮಣಿಪುರ 60 ಹಾಗೂ ಗೋವಾದ 40 ಸ್ಥಾನಗಳಲ್ಲಿ ಮತದಾನವಾಗಿದ್ದು, ಇಂದು ಎಲ್ಲ ರಾಜ್ಯಗಳ ಫಲಿತಾಂಶ ಬಹಿರಂಗಗೊಳ್ಳಲಿದೆ.