ಪುತ್ತೂರು: ಸೂರ್ಯನ ರಶ್ಮಿಯು ದೇವಿಯ ಬಿಂಬಕ್ಕೆ ಸ್ಪರ್ಶಿಸಲಿರುವ ರಾಜ್ಯದ ಎರಡನೇ ದೇವಸ್ಥಾನ ಎಂದು ಪ್ರಸಿದ್ದಿ ಪಡೆದಿರುವ ರೈಲು ನಿಲ್ದಾಣದ ಬಳಿಯ ಕಾರಣಿಕ ಕ್ಷೇತ್ರ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪ್ರತಿ ವರ್ಷ ಮೀನ ಸಂಕ್ರಮಣದಂದು ವಿಶೇಷವಾಗಿ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಿಯನ್ನು ಸೂರ್ಯ ರಶ್ಮಿಯು ಸ್ಪರ್ಶಿಸಲಿದೆ.
ಈ ಬಾರಿ ಮಾ.14ರ ಮೀನ ಸಂಕ್ರಮಣದಂದು ಮುಂಜಾನೆ ಸೂರ್ಯ ರಶ್ಮಿಯು ಶ್ರೀ ದೇವಿಯನ್ನು ಸ್ಪರ್ಶಿಸಲಿದೆ.
ಈ ಸಂದರ್ಭದಲ್ಲಿ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆಯು ನೆರವೇರಲಿದೆ.