ಉಪ್ಪಿನಂಗಡಿ: ಟೆಂಪೋ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಘಟನೆ ಕರುವೇಲು ಎಂಬಲ್ಲಿ ನಡೆದಿದೆ.
ಆದರ್ಶ ನಗರದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಹೋಗಿ ಬರುತ್ತಿದ್ದ ಟೆಂಪೋ ಮತ್ತು ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಹೊಸ ದ್ವಿಚಕ್ರ ವಾಹನ ಟಿವಿಎಸ್ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದಿಂದಾಗಿ ದ್ವಿಚಕ್ರ ವಾಹನ ಸವಾರ ನಟ್ಟಿಬೈಲು ನಿವಾಸಿ ದಿವಾಕರ ಎಂಬವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.