ಸವಣೂರು: ರಾಜ್ಯ ಸರಕಾರ ನೀಡುವ ಸಹಕಾರಿ ರತ್ನ ಪ್ರಶಸ್ತಿಗೆ ಆದರ್ಶ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ,ಹಿರಿಯ ಸಹಕಾರಿ ಧುರೀಣ ,ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ರವರು ಸೀತಾರಾಮ ರೈ ಅವರು ಆಯ್ಕೆಯಾಗಿದ್ದಾರೆ.
ಸವಣೂರು ಕೆ.ಸೀತಾರಾಮ ರೈ ಅವರು ಸಹಕಾರಿ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು ಮಾ.20ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಮೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.