ಮಂಗಳೂರು: ಅಂಡಮಾನ್ ನಿಕೋಬಾರ್ ಸಮುದ್ರದಲ್ಲಿ ವಾಯುಭಾರ ಕುಸಿತ ತೀವ್ರಗೊಂಡಿದ್ದರಿಂದ ಕರಾವಳಿ ಕರ್ನಾಟಕದ ಅನೇಕ ಭಾಗಗಳಲ್ಲಿ ಮಳೆ ಸುರಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮುಂತಾದ ಹಲವು ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಮಳೆ ಮುಂದುವರಿಯುವ ನಿರೀಕ್ಷೆ ಇದೆ.
ಮೂರು ದಿನಗಳಿಂದ ಬೆಂಗಳೂರು, ಮಂಗಳೂರು, ಉಡುಪಿ, ಶಿವಮೊಗ್ಗ, ಮೈಸೂರು, ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆ ಸುರಿಯುತ್ತಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಡುಗು ಸಹಿತ ಚಂಡಮಾರುತದ ಕಾರಣದಿಂದ ಮಾರ್ಚ್ 24ರ ವರೆಗೆ ದಕ್ಷಿಣ ಒಳಭಾಗ ಮತ್ತು ಕರಾವಳಿ ಕರ್ನಾಟಕದಾದ್ಯಂತ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ಕೋಲಾರದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ಕೋಲಾರದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.