ನವದೆಹಲಿ: ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಕಳೆದ ಒಂದು ವರ್ಷದಲ್ಲೇ ಕೊರೊನಾದಿಂದ ಸಾವನ್ನಪ್ಪಿರುವವರಿಗಿಂತ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಿದೆ ಎಂದು ಹೇಳಿದ್ದಾರೆ. ಅಲ್ಲದೇ ರಸ್ತೆ ಅಪಘಾತಗಳ ಸಂಖ್ಯೆಯನ್ನ ಗಣನೀಯವಾಗಿ ತಗ್ಗಿಸಲು ಬೇಕಾದ ಅಗತ್ಯ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ ಎಂದಿದ್ದಾರೆ.
ನಮ್ಮ ಸರ್ಕಾರ ರಸ್ತೆ ಅಪಘಾತಗಳ ಸಂಖ್ಯೆಯನ್ನ ಕಡಿಮೆಗೊಳಿಸುವುದನ್ನ ಗಂಭೀರವಾಗಿ ಪರಿಗಣಿಸಿದೆ. ಕಳೆದ ವರ್ಷ 1.5 ಲಕ್ಷ ಜನರು ರಸ್ತೆ ಅಪಘಾತಗಳಿಂದಾಗಿ ಸಾವನ್ನಪ್ಪಿದ್ದಾರೆ. ಈ ಸಂಖ್ಯೆ ಕೊರೊನಾದಿಂದಾಗಿ ದೇಶದಲ್ಲಿ ಸಾವನ್ನಪ್ಪಿದವರಿಗಿಂತಲೂ ಹೆಚ್ಚಿದೆ. ದೇಶದಲ್ಲಿ ಕೊರೊನಾದಿಂದಾಗಿ 1.46 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. ಇದ್ರಲ್ಲಿ 18-35 ವಯಸ್ಸಿನ ಜನರೇ ಹೆಚ್ಚಾಗಿ ರಸ್ತೆ ಅಪಘಾತಗಳಿಂದ ಸಾವನ್ನಪ್ಪಿದ್ದಾರೆ ಎಂದು ಗಡ್ಕರಿ ಹೇಳಿದ್ದಾರೆ.
ಇತ್ತೀಚಿನ ವರ್ಲ್ಡ್ ಬ್ಯಾಂಕ್ ವರದಿಯ ಪ್ರಕಾರ. ಜಾಗತಿಕವಾಗಿ ಭಾರತದಲ್ಲೇ ಹೆಚ್ಚು ಮಂದಿ ರಸ್ತೆ ಅಪಘಾತಗಳಿಂದಾಗಿ ಸಾವನ್ನಪ್ಪಿದ್ದಾರೆ. 1.5 ಲಕ್ಷ ಜನರು ರಸ್ತೆ ಅಪಘಾತಗಳಿಂದ ಸಾವನ್ನಪ್ಪಿದ್ದರೆ 4.5 ಲಕ್ಷ ಜನರು ಅಪಘಾತಗಳಲ್ಲಿ ಗಾಯಗೊಂಡಿದ್ದಾರೆ. ದೇಶದಲ್ಲಿ ವಾರ್ಷಿಕವಾಗಿ 4.5 ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು 3.14 ಪರ್ಸೆಂಟ್ ಜಿಡಿಪಿ ಇದರಿಂದಲೇ ಲಾಸ್ ಆಗುತ್ತಿದೆ ಎಂದಿದೆ.