ಕರಾವಳಿ ಭಾಗದ ‘ಭಗೀರಥ’ ಎಂದೇ ಖ್ಯಾತಿ ಗಳಿಸಿರುವ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ಮಹಾಲಿಂಗ ನಾಯ್ಕರಿಗೆ ದೇಶದ ಅತ್ಯುನ್ನತ ನಾಲ್ಕನೇ ನಾಗರೀಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ರು. ತುಳುನಾಡಿನ ಸಂಸ್ಕೃತಿಯ ಭಾಗವಾದ ಮುಟ್ಟಾಲೆಯನ್ನು ಧರಿಸಿ ಪ್ರಶಸ್ತಿ ಸ್ವೀಕರಿಸಿದ್ದು ಪ್ರಮುಖ ಆಕರ್ಷಣೆಯಾಗಿತ್ತು.
ಈ ಸಂದರ್ಭ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಇತರ ಗಣ್ಯಾತಿ ಗಣ್ಯರು ಉಪಸ್ಥಿತರಿದ್ದರು.