ಪುತ್ತೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಫ್ರಿಡ್ಜ್ ರಿಪೇರಿ ಮಳಿಗೆಯೊಂದು ಬೆಂಕಿಗಾಹುತಿಯಾದ ಘಟನೆ ಉರ್ಲಾಂಡಿಯ ಶ್ರುಶ್ರುತ ಆಸ್ಪತ್ರೆ ಬಳಿಯ ಕೃಷ್ಣ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ.
ಉರ್ಲಾಂಡಿಯ ಕೃಷ್ಣ ಕಾಂಪ್ಲೆಕ್ಸ್ ನಲ್ಲಿರುವ ಸುರಭಿ ಫ್ರಿಡ್ಜ್ ರಿಪೇರಿ ಮಳಿಗೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಘಟನೆಯಿಂದಾಗಿ ಸಂಪೂರ್ಣ ಅಂಗಡಿ ಸುಟ್ಟು ಹೋಗಿದೆ. ಫ್ರಿಡ್ಜ್, ಟಿವಿಯಂತಹ ಬೆಲೆ ಬಾಳುವ ವಸ್ತುಗಳು ಸುಟ್ಟು ಹೋಗಿದ್ದು, ಅಪಾರ ನಷ್ಟ ಸಂಭವಿಸಿದೆ.
ಘಟನೆ ಸಂಭವಿಸಿದ ವೇಳೆ ಮಳಿಗೆ ಕ್ಲೋಸ್ ಆಗಿದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಆದರೇ ಹಲವು ವಸ್ತುಗಳು ಸಂಪೂರ್ಣ ಸುಟ್ಟು ಹೋಗಿದ್ದು, ಕೆಲವು ಅರೆಬರೆ ಸುಟ್ಟು ಹೋಗಿದೆ. ಸ್ಥಳಕ್ಕೆ ಪುತ್ತೂರು ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ.