ಮಂಗಳೂರು: ಟ್ಯಾಂಕರ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ಫೋನ್ ನಲ್ಲಿ ಮಾತನಾಡುತ್ತಿದ್ದ ಯುವಕನಿಗೆ ಡಿಕ್ಕಿಯಾದ ಕಾರಣ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನ ಅಡ್ಡೂರು ಬಳಿ ನಡೆದಿದೆ.
ಹ್ಯಾರಿಸ್ (25) ಮೃತ ದುರ್ದೈವಿ.
ಮಂಗಳೂರಿನಿಂದ ಅಡುಗೆ ಅನಿಲವನ್ನು ಸಾಗಿಸುತ್ತಿದ್ದ ಟ್ಯಾಂಕರ್ ಅಂಗಡಿ ಬಳಿಯ ರಸ್ತೆಯಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ಹ್ಯಾರಿಸ್ ಗೆ ಡಿಕ್ಕಿ ಹೊಡೆದು ಬಳಿಕ ಅಂಗಡಿಗೆ ಡಿಕ್ಕಿ ಹೊಡೆದಿದೆ.
ಅತಿ ವೇಗವಾಗಿ ಟ್ಯಾಂಕರ್ ಚಲಾಯಿಸುತ್ತಿದ್ದದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಅಂಗಡಿ ಸಂಪೂರ್ಣವಾಗಿ ಜಖಂಗೊಂಡಿದೆ.