ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾದ ಆರನೇ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿಟ್ಲದ ಅಡ್ಯನಡ್ಕ ಸಮೀಪದ ವಾರಣಾಸಿಯಲ್ಲಿನ ನರ್ಸರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ವಾರಣಾಸಿ ಸಂಶೋಧನಾ ಪ್ರತಿಷ್ಠಾನದ ಡಾ. ಕೃಷ್ಣಮೂರ್ತಿ, ಡಾ.ಅಶ್ವಿನಿ ಕೃಷ್ಣಮೂರ್ತಿ ಮತ್ತು ಡಾ. ನಿವೇದಿತಾ ಸಾವಾಯವ ಕೃಷಿ ಮತ್ತು ಅಲ್ಲಿನ ವ್ಯವಸ್ಥೆಗಳ ಸ್ಥೂಲವಾದ ಮಾಹಿತಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಯುರೇಕಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳು, ಕಾಲೇಜಿನ ಉಪನ್ಯಾಸಕರು ಜೊತೆಗಿದ್ದರು.