ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಶ್ರೇಯ ಪಕ್ಕಳ ಅವರು ಹೃದಯಾಗಾತದಿಂದಾಗಿ ಅಸುನೀಗಿದ್ದಾರೆ.ಪುತ್ತೂರು ವಿವೇಕಾನಂದ ಕಾಲೇಜಿನ ವಿಜ್ಞಾನ ವಿಭಾಗದ ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಶ್ರೇಯ 16ರ ಹರೆಯದಲ್ಲೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.ಪುತ್ತೂರು ತಾಲೂಕು ಬೆಳ್ಳಿಪ್ಪಾಡಿ ಪದ್ಮ ಪಕ್ಕಳ ಮತ್ತು ಉಮಾವತಿ ದಂಪತಿಯ ಎರಡನೇ ಪುತ್ರಿಯಾಗಿರುವ ಇವರು ಸದಾ ಚಟುವಟಿಕೆಯಿಂದ ಲವಲವಿಕೆಯಿಂದ ಇದ್ದ ಹುಡುಗಿಯಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಸಾಧ್ಯವಾಗದೆ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆಗೆ ಸಾವನ್ನಪ್ಪಿದ್ದಾರೆ.