ಉಡುಪಿ: ಕರ್ತವ್ಯನಿರತ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಓರ್ವರು ಗುಂಡಿಕ್ಕಿಕೊಂಡು ಆತ್ಮಹತ್ಯೆಗೈದ ಘಟನೆ ಆದಿ ಉಡುಪಿ ಪ್ರೌಢಶಾಲೆ ಬಳಿ ಏ. 29ರ ಶುಕ್ರವಾರ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆಯನ್ನು ರಾಜೇಶ್ ಕುಂದರ್ ಎಂದು ಗುರುತಿಸಲಾಗಿದೆ.

ರಾಜೇಶ್ ಅವರು ಆದಿ ಉಡುಪಿ ಶಾಲೆಯಲ್ಲಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಕಾವಲು ಕರ್ತವ್ಯದಲ್ಲಿದ್ದರು. ರಾತ್ರಿ ವೇಳೆಯಲ್ಲಿ ರಾಜೇಶ್ ಕುಂದರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.