ನವದೆಹಲಿ: ಉತ್ತರ ಪ್ರದೇಶದ ಧಾರ್ಮಿಕ ಸ್ಥಳಗಳಲ್ಲಿ ಅನಧಿಕೃತ ಧ್ವನಿವರ್ಧಕ ತೆರವು ಕಾರ್ಯಾಚರಣೆ ಮುಂದುವರಿದಿದ್ದು, 53,942 ಅನಧಿಕೃತ ಧ್ವನಿವರ್ದಕಗಳನ್ನು ತೆರವುಗೊಳಿಸಲಾಗಿದೆ.
ಏ.25 ರಿಂದ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಧಾರ್ಮಿಕ ಸಂಸ್ಥೆಗಳಿಗೆ ತಾರತಮ್ಯ ಮಾಡದೆ ತೆರವು ಕಾರ್ಯ ಮಾಡಲಾಗಿದೆ.
ಸರ್ಕಾರದ ಅನುಮತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ 60,000 ಧ್ವನಿವರ್ಧಕಗಳಿಗೆ ತಜ್ಞರು ವಿಧಿಸಿರುವ ಶಬ್ದಮಿತಿಗೆ ಸೀಮಿತಗೊಳಿಸಲಾಗಿದೆ ಎಂದು ಉತ್ತರ ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.