ವಿಟ್ಲ: ಬಾಡಿಗೆ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಬಾಲಕಿ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಮೇ.9 ರಂದು ಕನ್ಯಾನ ಪೇಟೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕನ್ಯಾನ ವಲಯದ ವತಿಯಿಂದ ಕನ್ಯಾನ ರಾಘವೇಂದ್ರ ಭಜನಾ ಮಂದಿರದಿಂದ ಕನ್ಯಾನ ಪೇಟೆಯವರೆಗೆ ಬೃಹತ್ ಪ್ರತಿಭಟನಾ ಜಾಥ ನಡೆಯಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ ಸೇರಿದಂತೆ, ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಉಪಾಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ವಿಶ್ವ ಹಿಂದೂ ಪರಿಷದ್ ವಿಟ್ಲ ಅಧ್ಯಕ್ಷ ಪದ್ಮನಾಭ ಕಟ್ಟೆ, ವಿಟ್ಲ ಬಜರಂಗದಳದ ಸಂಚಾಲಕ ಚಂದ್ರಹಾಸ ಕನ್ಯಾನ, ವಿಶ್ವ ಹಿಂದೂ ಪರಿಷದ್ ಮುಖಂಡ ಗೋವರ್ಧನ್ ಸೇರಿದಂತೆ ಹಲವು ಸಂಘಟನಾ ಪ್ರಮುಖರು ಹಾಗೂ ಸಂಘಟನಾ ಕಾರ್ಯಕರ್ತರು ಉಪಸ್ಥಿತರಿದ್ದರು.



