ಬೆಂಗಳೂರು: ಮಕ್ಕಳಲ್ಲಿ ಕಂಡು ಬರುವ ಟೊಮೆಟೋ ಜ್ವರ’ ರೋಗದ ಹರಡುವಿಕೆ ತಡೆಗಟ್ಟಲು ಕರ್ನಾಟಕ ಕೇರಳ ಗಡಿಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕೇರಳದಲ್ಲಿ ಈ ರೋಗದ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿರುವುದರಿಂದ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಕೇರಳದಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ಇರಿಸಲು ಸೂಚನೆ ನೀಡಲಾಗಿದೆ’ ಎಂದರು.
ಇದು ಈಗಾಗಲೇ ಇರುವ ಕಾಯಿಲೆಯಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ರಾಜ್ಯದ ಯಾವುದೇ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ ಈ ರೋಗ ಲಕ್ಷಣ ಕಂಡು ಬರುವ ಮಕ್ಕಳ ಬಗ್ಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ. ಟೊಮೆಟೊ ಜ್ವರಕ್ಕೂ ಕೊರೊನಾಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ರೋಗದ ಲಕ್ಷಣ:
- ಈ ರೋಗವು ಸಾಮಾನ್ಯವಾಗಿ 5 ವರ್ಷ ವಯಸ್ಸಿನ ಒಳಗಿನ ಮಕ್ಕಳಲ್ಲಿ ಕಂಡು ಬರುತ್ತದೆ.
- ಚರ್ಮದ ತುರಿಕೆ, ಕೆಂಪಾಗುವುದು, ನೀರಡಿಕೆ ಮೊದಲಾದ ಲಕ್ಷಣಗಳನ್ನು ಹೊಂದಿವೆ.
- ತೀವ್ರ ಜ್ವರ, ಮೈ ಕೈ ನೋವು, ಕೀಲು ನೋವು, ಆಯಾಸ ಮೊದಲಾದ ಲಕ್ಷಣಗಳೂ ಕಂಡುಬರುತ್ತವೆ.