ಮಂಗಳೂರು: ಖ್ಯಾತ ಸ್ಯಾಕ್ಸೋಫೋನ್ ಕಲಾವಿದೆ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಶಕ್ತಿನಗರ ಬಳಿ ನಡೆದಿದೆ.
ಮೃತಳನ್ನು ಸುಜಾತ ದೇವಾಡಿಗ(29) ಎಂದು ಗುರುತಿಸಲಾಗಿದೆ.

ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿನಗರದ ಫ್ಲ್ಯಾಟ್‌ವೊಂದರಲ್ಲಿ ಅವಿಭಕ್ತ ಕುಟುಂಬದಲ್ಲಿ ವಾಸವಾಗಿದ್ದ ಈಕೆ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಊಟ ಮಾಡಿ ಕೋಣೆಯೊಳಗೆ ಹೋಗಿ ಚಿಲಕ ಹಾಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕಂಕನಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
ಮೂಲತಃ ಮೂಲ್ಕಿ ಎಸ್ ವಿಟಿ ಬಳಿಯ ನಿವಾಸಿಯಾದ ಸುಜಾತ ಮುಲ್ಕಿಯಲ್ಲಿ ಓದು ಮುಗಿಸಿ ಉತ್ತಮ ಸ್ಯಾಕ್ಸೋಫೋನ್ ಕಲಾವಿದೆಯಾಗಿದ್ದರು.


























