ಮಂಗಳೂರು: ಸ್ಕೂಟರ್ನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಮಳವೂರು ಗ್ರಾಮದ ಕರಂಬಾರು ನಿವಾಸಿ ಗೋಪಾಲಕೃಷ್ಣ ಅಲಿಯಾಸ್ ಗೋಪಾಲ್ (45) ಬಂಧಿತ ಆರೋಪಿ.
ಗೋಪಾಲ್ ದ್ವಿಚಕ್ರ ವಾಹನದ ಸಿಟಿನ ಅಡಿ ಭಾಗದಲ್ಲಿ ಮಾದಕ ವಸ್ತುಗಳನ್ನು ಇಟ್ಟು ಸಾಗಿಸುತ್ತಿದ್ದ. ಈತ ಹೆಲ್ಮೆಟ್ ಧರಿಸದಿದ್ದುದರಿಂದ ಕರಂಬಾರು ಬಳಿ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದ ವೇಳೆ ವಾಹನ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಆದರೂ ಈತ ಬೈಕ್ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದ. ಅವನನ್ನು ಬೆನ್ನಟ್ಟಿದ್ದ ಪೊಲೀಸರು ದಸ್ತಗಿರಿ ಮಾಡಿ ಸ್ಕೂಟರ್ನ್ನು ತಪಾಸಣೆಗೊಳಪಡಿಸಿದಾಗ 7,500 ಮೌಲ್ಯದ ಮಾದಕ ವಸ್ತು ಪತ್ತೆಯಾಗಿದೆ.
ಈ ಆರೋಪಿ ವಿರುದ್ಧ ಬೇರೆ ಬೇರೆ ಠಾಣೆಗಳಲ್ಲಿ ಗಾಂಜಾ ಮಾರಾಟ ಪ್ರಕರಣ ದಾಖಲಾಗಿದೆ ಎಂದು ಹೆಚ್ಚಿನ ವಿಚಾರಣೆಯಲ್ಲಿ ತಿಳಿದುಬಂದಿದೆ.
ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

























