ಪುತ್ತೂರು: 2021-22ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆಗೆ ಶೇ.100% ಫಲಿತಾಂಶ ಬಂದಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆಗೆ ಶೇ.100% ಫಲಿತಾಂಶ ಬಂದಿದ್ದು, ಉತ್ತಮ ಫಲಿತಾಂಶ ಬರಲು ತಮ್ಮ ಶ್ರಮ ವಹಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಶಾಸಕರಾದ ಸಂಜೀವ ಮಠಂದೂರು ರವರು ಅಭಿನಂದಿಸಿದರು.

ಈ ವೇಳೆ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



























