ಜಮ್ಮು: ಜಮ್ಮುವಿನಲ್ಲಿರುವ ವೈಷ್ಣೋದೇವಿ ದೇವಾಲಯಕ್ಕೆ ಕಳೆದ 20 ವರ್ಷಗಳಲ್ಲಿ ಸುಮಾರು 4 ಸಾವಿರದ 700 ಕೆ.ಜಿ ಬೆಳ್ಳಿ ಮತ್ತು 1,800 ಕೆ.ಜಿ ಚಿನ್ನ ದೇಣಿಗೆಯ ರೂಪದಲ್ಲಿ ಹರಿದುಬಂದಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ತಿಳಿದುಬಂದಿದೆ.
ಪ್ರತಿವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುವ ವೈಷ್ಣೋದೇವಿ ದೇವಾಲಯ ದೇಶದ ಅತಿ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿದೆ. ಪ್ರತಿವರ್ಷ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತು ನಗದು ಈ ದೇವಸ್ಥಾನದಲ್ಲಿ ಸಂಗ್ರಹವಾಗುತ್ತಿದೆ ಎನ್ನಲಾಗಿದೆ.
ಸಾಮಾಜಿಕ ಕಾರ್ಯಕರ್ತ ಹೇಮಂತ್ ಗೌನಿಯಾ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಕೇಳಿದ್ದ ಪ್ರಶ್ನೆಗೆ ವೈಷ್ಣೋದೇವಿ ದೇವಾಲಯ ಆಡಳಿತದಿಂದ ಉತ್ತರ ಬಂದಿದ್ದು, 20 ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿ ನಗದು ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.