ಮಂಗಳೂರು: ಬಿಕರ್ನಕಟ್ಟೆ ರಾ.ಹೆ 73 ನೇ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಧೀರಜ್ (25) ರವರು ಸೋಮವಾರ ರಾತ್ರಿ ಮೆದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ್ದು, ಮೃತರ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಶನಿವಾರ ತಡರಾತ್ರಿ ಗಣೇಶ್ ತನ್ನ ಸ್ನೇಹಿತ ಧೀರಜ್ ನನ್ನು ಮನೆಗೆ ಬಿಟ್ಟು ಬರುವುದಾಗಿ ಬೈಕ್ ನಲ್ಲಿ ತೆರಳಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಗೆ ಡಿಕ್ಕಿ ಹೊಡೆದು ಸವಾರರು ಗಂಭೀರ ಗಾಯಗೊಂಡಿದ್ದರು.
ಧೀರಜ್ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಸೋಮವಾರ ರಾತ್ರಿ ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ್ದಾರೆ. ಅಂಗಾಂಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಗಂಭೀರ ಗಾಯಗೊಂಡಿದ್ದ ಗಣೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


























