ವಿಟ್ಲ : ಪಡ್ನೂರು ಗ್ರಾಮ ಪಂಚಾಯತ್ ಕಾರ್ಮಿಕ ಇಲಾಖೆ ಬಂಟ್ವಾಳ ಇದರ ಸಹಯೋಗದೊಂದಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ಶಿಬಿರ ಕಾರ್ಯಕ್ರಮವು ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಷ್ಮಾ ಶಂಕರಿ ರವರು ಆರೋಗ್ಯವಂತ ಕಾರ್ಮಿಕರು ದೇಶದ ಆಸ್ತಿ.ಆರೋಗ್ಯವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದರು ಮಾತನಾಡಿದರು.
ವೈದ್ಯಾಧಿಕಾರಿಯವರಾದ ಪ್ರಣವ್ ಭಂಡಾರಿಯವರು ಆರೋಗ್ಯ ತಪಾಸಣೆಯ ಮೂಲ ಉದ್ದೇಶ ಹಾಗೂ ಮಾಹಿತಿ ನೀಡಿದರು. ಪಂಚಾಯತ್ ಮಾಜಿ ಅಧ್ಯಕ್ಷರಾದ ರವೀಶ್ ಶೆಟ್ಟಿ ಕರ್ಕಳ ರವರು ಕಾರ್ಯಕ್ರಮದ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ನಾಗೇಶ್ ಕುಮಾರ್, ಸಂದೇಶ್ ಶೆಟ್ಟಿ, ಅಮಿತ, ಜಯಲಕ್ಷ್ಮಿ, ರೇಖಾ, ಜಯಭಾರತಿ, ಹರಿ ಕಿಶೋರ್ , ಶ್ರೀಮತಿ ನೆಬಿಸಾ ಕೆ ಎಚ್ , ಉಪಸ್ಥಿತರಿದ್ದರು. (ಪ್ರಭಾರ ) ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಜಯ ಕೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಶಿಬಿರಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

























