ಪುತ್ತೂರು: ಅಜ್ಜಿಕಲ್ಲು ಶ್ರೀ ಶಕ್ತಿ ಜಠಾಧಾರಿ ಭಜನಾ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಜೂ.1 ರಿಂದ 3 ರವರೆಗೆ ನಡೆಯಲಿದೆ.
ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ರವರ ಉಪಸ್ಥಿತಿಯಲ್ಲಿ ವೇದಮೂರ್ತಿ ಬ್ರಹ್ಮಶ್ರೀ ದಿನೇಶ ಮರಡಿತ್ತಾಯ ಗುಮ್ಮಟೆಗದ್ದೆ ರವರ ನೇತೃತ್ವದಲ್ಲಿ ವಾಸ್ತುಶಿಲ್ಪಿ ವಿ.ಜಿ.ಜಗನ್ನಿವಾಸ ರಾವ್ ರವರ ಮಾರ್ಗದರ್ಶನದಲ್ಲಿ ಭಜನಾ ಮಂದಿರದ ಶಂಕುಸ್ಥಾಪನೆ ನೆರವೇರಲಿದೆ.
ಜೂ.1 ರಂದು ರಾತ್ರಿ ಸುದರ್ಶನ ಹೋಮ, ಅಘೋರ ಹೋಮ, ಭಾದಾ ಉಚ್ಚಾಟನೆ ನಂತರ ಅನ್ನಸಂತರ್ಪಣೆ ನಡೆಯಲಿದೆ.
ಜೂ.2 ರಂದು ಬೆಳಿಗ್ಗೆ 108 ಕಾಯಿ ಗಣಪತಿ ಹೋಮ, ಭಾಗ ಸೂಕ್ತ ಹಾಗೂ ಐಕ್ಯಮತ್ಯ ಪೂಜೆ, ಪಾರಾಯಣ, ಮಹಾಪೂಜೆ, ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಲಿದೆ. ಜೂ.3 ರಂದು ಬೆಳಿಗ್ಗೆ ಗಂಟೆ 9.37 ರ ಕರ್ಕಾಟಕ ಲಗ್ನದಲ್ಲಿ ನೂತನ ಭಜನಾ ಮಂದಿರಕ್ಕೆ ಶಂಕುಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಅಧ್ಯಕ್ಷ ಅಜಿತ್ ಹೊಸಮನೆ ಮತ್ತು ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























