ಪುತ್ತೂರು: ಕೋಡಿಂಬಾಡಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವನೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೋಡಿಂಬಾಡಿ ಗ್ರಾಮದ ಅನುಗ್ರಹ ಸ್ಟೋರ್ ಎಂಬಲ್ಲಿ ಶಶಿಧರ ಕೆ ಎಂಬಾತ ಅಮಲು ಪದಾರ್ಥ ಸೇವಿಸುತ್ತಿರುವುದನ್ನು ಗಮನಿಸಿದ ಪೊಲೀಸರು ಆತನನ್ನು ಬಂಧಿಸಿ ಮದ್ಯವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

























