ಪುತ್ತೂರು: ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ಆರ್ಲಪದವು, ಪಾಣಾಜೆ, ಅರಣ್ಯ ಇಲಾಖೆ ಪುತ್ತೂರು ವಲಯ ಹಾಗೂ ದ.ಕ.ಜಿ.ಪಂ.ಉ.ಪ್ರಾ.ಶಾಲೆ ಒಡ್ಯ ಇದರ ಆಶ್ರಯದಲ್ಲಿ ವನಮಹೋತ್ಸವ, ಸ್ವಚ್ಛತಾ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭ ಜೂ.5 ರಂದು ಒಡ್ಯ ಶಾಲೆಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪಾಣಾಜೆ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ನವೀನ್ ರೈ ಚೆಲ್ಯಡ್ಕ ರವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಸಂಚಾಲಕರಾದ ಶ್ರೀಪ್ರಸಾದ್ ಪಾಣಾಜೆ ರವರು ವಹಿಸಲಿದ್ದಾರೆ.
ಸಸಿ ವಿತರಣೆಯನ್ನು ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ಭಟ್ ರವರು ನೆರವೇರಿಸಲಿದ್ದಾರೆ. ಗಿಡ ನೆಡುವ ಕಾರ್ಯಕ್ರಮಕ್ಕೆ ಪುತ್ತೂರು ವಲಯರಣ್ಯಾಧಿಕಾರಿ ಕಿರಣ್ ರವರು ಚಾಲನೆ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕರಾದ ಲಕ್ಷ್ಮೀನಾರಾಯಣ ರೈ ಕೆದಂಬಾಡಿ, ಪಾಣಾಜೆ ವಲಯ ಉಪ ವಲಯಾರಣ್ಯಧಿಕಾರಿ ಪ್ರಕಾಶ್ ಬಿ.ಟಿ., ಪಾಣಾಜೆ ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಅಬೂಬಕ್ಕರ್ ಆರ್ಲಪದವು, ಬೆಟ್ಟಂಪಾಡಿ ವಲಯದ ಜನಜಾಗೃತಿ ಸಮಿತಿ ಅಧ್ಯಕ್ಷರಾದ ಸದಾಶಿವ ರೈ ಸೂರಂಬೈಲು, ಪ್ರಗತಿಪರ ಕೃಷಿಕರಾದ ಶಂಕರ್ ರೈ ಬಾಳೆಮೂಲೆ, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ನಿರ್ದೇಶಕರಾದ ರವೀಂದ್ರ ಭಂಡಾರಿ, ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಚಂದ್ರ ಎ.ಬಿ., ಪಾಣಾಜೆ ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ನಾಯ್ಕ್, ಪಾಣಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಪಾಣಾಜೆ ಗ್ರಾಮ ಪಂಚಾಯತ್ ಸದಸ್ಯರಾದ ವಿಮಲಾ, ಒಡ್ಯ ಶಾಲೆಯ ಮಾಜಿ ಎಸ್ಡಿಎಂಸಿ ಅಧ್ಯಕ್ಷರಾದ ಕೃಷ್ಣ ಭಟ್, ಮುಖ್ಯೋಪಾಧ್ಯಾಯರಾದ ಜನಾರ್ಧನ್, ಅರಣ್ಯ ರಕ್ಷಕರಾದ ನಿಂಗರಾಜ್,ಸುಧೀರ್, ಉಮೇಶ್, ದೇವಪ್ಪ ನಾಯ್ಕ ಆಗಮಿಸಲಿದ್ದಾರೆ.


























