ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಜೂ.7 ಮತ್ತು 8 ರಂದು ನಿಗದಿಯಾಗಿದ್ದ ನಾಗನ ಪ್ರತಿಷ್ಠಾ ಕಾರ್ಯವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಲೋಕಪ್ಪ ಗೌಡ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.
ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ನಾಗನಕಟ್ಟೆ ವಿವಾದ ಹಲವು ದಿನಗಳಿಂದ ಚರ್ಚೆಯಾಗುತ್ತಿದ್ದು, ನಾಗನ ಕಟ್ಟೆಯನ್ನು ಅವೈಜ್ಞಾನಿಕವಾಗಿ ಕಟ್ಟಲಾಗುತ್ತಿದೆ ಎಂದು ಆರೋಪಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಮೇ.30 ರಂದು ಪ್ರತಿಭಟನೆಯನ್ನು ನಡೆಸಿದ್ದರು.
ಅದೇ ರೀತಿ ವ್ಯವಸ್ಥಾಪನಾ ಸಮಿತಿಯಿಂದ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಮಿತಿಯನ್ನು ವಜಾಗೊಳಿಸುವಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಭಕ್ತಾಧಿಗಳು ಮನವಿಯನ್ನು ಸಲ್ಲಿಸಿದ್ದರು.

























