ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಬಿ.ಸಿ. ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಫಾ (24) ಬಂಧಿತ ಆರೋಪಿ.

ಯುವತಿ ಸೋಮವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಮುಸ್ತಾಫಾ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಯುವತಿಗೆ ಹಾಗೂ ಸಹ ಪ್ರಯಾಣಿಕರಿಗೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಈ ಕುರಿತು ಯುವತಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಜೂ.6- ಜು.9ರ ವರೆಗೆ ಒಂದು ತಿಂಗಳು ಪುತ್ತೂರಿನಲ್ಲಿ ಶಾಪಿಂಗ್ ಫೆಸ್ಟಿವಲ್..
























