ಪುತ್ತೂರು: ಬೆಳ್ಳಿಪ್ಪಾಡಿ ಮನೆತನದ, ಯುವ-ಉದ್ಯಮಿ, ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಗುಣರಂಜನ್ ಶೆಟ್ಟಿಯವರ ಹತ್ಯೆಗೆ ಗುಂಪೊಂದು ಸಂಚು ರೂಪಿಸಿರುವ ಬಗ್ಗೆ ಬೆಂಗಳೂರು ಮತ್ತು ಮಂಗಳೂರು ಪೊಲೀಸರು ಜಂಟಿ ತನಿಖೆ ಆರಂಭಿಸಿದ್ದಾರೆ.
ಯುವ ಉದ್ಯಮಿ ಗುಣರಂಜನ್ ಶೆಟ್ಟಿಯವರನ್ನು ಕೊಲೆ ಮಾಡಲು ಸಂಚು ರೂಪಿಸಿರುವ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಬೆಂಗಳೂರು ಮತ್ತು ಮಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಭೂಗತ ಲೋಕದ ಮಾಜಿ ಡಾನ್, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್. ಮುತ್ತಪ್ಪ ರೈಯವರ ಆಪ್ತರೂ, ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಗುಣರಂಜನ್ ಶೆಟ್ಟಿಯವರು ಈಗಾಗಲೇ ನಾಲ್ವರು ಅಂಗ ರಕ್ಷಕರನ್ನು ಹೊಂದಿದ್ದಾರೆ. ಖಾಸಗಿ ಏಜೆನ್ಸಿ ಮೂಲಕ ಭದ್ರತೆ ಪಡೆದುಕೊಂಡಿರುವ ಗುಣರಂಜನ್ ಶೆಟ್ಟಿಯವರಿಗೆ ಅನಿವಾರ್ಯವಾದರೆ ಪೊಲೀಸ್ ಇಲಾಖೆಯಿಂದಲೂ ಭದ್ರತೆ ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ. ಅಲ್ಲದೆ, ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಗುಣರಂಜನ್ ಸೆಟ್ಟಿ ಹತ್ಯೆ ಸಂಚು ರೂಪಿಸಿದ ಪ್ರಕರಣದಲ್ಲಿ ಖ್ಯಾತ ಯುವ ಉದ್ಯಮಿ ಮನ್ಮಿತ್ ರೈ ಯವರ ಹೆಸರು ಕೇಳಿ ಬರುತ್ತಿದ್ದು, ಈ ಬಗ್ಗೆ ಮನ್ಮಿತ್ ರೈ ರವರ ತನ್ನ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನನಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ..!!
ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ನಡೆದಿದೆಯೋ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ, ಈ ಪ್ರಕರಣದಲ್ಲಿ ನನ್ನ ಕೈವಾಡವಂತೂ ಇಲ್ಲವೇ ಇಲ್ಲ ಎಂದು ಮನ್ಮಿತ್ ರೈ ಪ್ರತಿಕ್ರಿಯಿಸಿದ್ದಾರೆ.
ಕ್ರಿಮಿನಲ್ ಚಟುವಟಿಕೆಗಳಲ್ಲಿ ನಾನು ಹಿಂದೆ ಗುರುತಿಸಿಕೊಂಡಿಲ್ಲ, ಭವಿಷ್ಯದ ದಿನಗಳಲ್ಲಿ ಭೂಗತ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಮನ್ಮಿತ್ ರೈ ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ನನ್ನ ಹೆಸರನ್ನು ಪ್ರಸ್ತಾಪಿಸುತ್ತಿರುವುದು ನಿಜ. ಆದರೆ ಯಾವುದೇ ಕಾರಣಕ್ಕೂ ನಾನು ಸಂಚಿನಲ್ಲಿ ಒಳಗೊಂಡಿಲ್ಲ. ಗುಣ ರಂಜನ್ ಶೆಟ್ಟಿ ಅವರಿಗೂ ಈ ಕುರಿತು ಮನವರಿಕೆ ಮಾಡಿರುತ್ತೇನೆ., ನಾನು ಉದ್ಯಮ ಆರಂಭಿಸುವ ಉದ್ದೇಶದಿಂದ ಥೈಲ್ಯಾಂಡಿಗೆ ಬಂದಿದ್ದೇನೆ ಎಂದು ಭೂಗತ ದೊರೆ ಮುತ್ತಪ್ಪ ರೈ ಅವರ ನಿಕಟ ಸಂಬಂಧಿಯೂ ಆಗಿರುವ ಅವರು ಸ್ಪಷ್ಟಪಡಿಸಿದ್ದಾರೆ.
ಪುತ್ತೂರು ತಾಲೂಕಿನಲ್ಲಿ ನಾನು ಹಲವು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇ., ಕೊರೊನಾ ಸಂಕಷ್ಟದಿಂದ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗಿದ್ದೇನೆ. ಇದನ್ನು ಸಹಿಸದ ಕೆಲವರು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಮಾದಕವಸ್ತು ಪ್ರಕರಣದಲ್ಲಿ ನನ್ನ ಹೆಸರನ್ನು ಎಳೆದು ತರುವ ಪ್ರಯತ್ನಗಳು ನಡೆದಿತ್ತು. ಇವೆಲ್ಲದರಿಂದ ಮನನೊಂದು ನಾನು ವಿದೇಶಕ್ಕೆ ಬಂದಿದ್ದೇನೆ. ಕೊಲೆಗೆ ಸಂಚು ರೂಪಿಸುವ ಪ್ರಕರಣದ ಬಗ್ಗೆ ಪೊಲೀಸರು ಸ್ಪಷ್ಟ ತನಿಖೆ ನಡೆಸಿದ್ದೇ ಆದಲ್ಲಿ ಸತ್ಯ ಹೊರಬರಲಿದೆ ಎಂದು ಮನ್ಮಿತ್ ರೈ ತಿಳಿಸಿದ್ದಾರೆ.
ಜೂ.6- ಜು.9ರ ವರೆಗೆ ಒಂದು ತಿಂಗಳು ಪುತ್ತೂರಿನಲ್ಲಿ ಶಾಪಿಂಗ್ ಫೆಸ್ಟಿವಲ್..

























