ವಿಟ್ಲ: ಲಾರಿ ಡಿಕ್ಕಿಯಾಗಿ ವ್ಯಕ್ತಿಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಪ್ರಭಾ ವೈನ್ ಶಾಪ್ ಬಳಿ ನಡೆದಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಕಡಂಬು ನಿವಾಸಿ ನಾರಾಯಣ ಎತ್ತುಗಲ್ಲು ಎಂದು ಗುರುತಿಸಲಾಗಿದೆ.

ನಾರಾಯಣ ರವರು ಕೂಲಿ ಕೆಲಸ ನಿರ್ವಹಿಸುತ್ತಿದ್ದು, ರಸ್ತೆ ದಾಟುತ್ತಿದ್ದಾಗ ಈ ಘಟನೆ ನಡೆದಿದ್ದು, ಅಪಘಾತದಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.




























