ಬಂಟ್ವಾಳ: ಪೆರ್ನೆ ಬಿಳಿಯೂರು ಪಂಚಾಯತ್ ನಲ್ಲಿ ಜೂ.13 ರಂದು ನಡೆಯಬೇಕಾಗಿದ್ದ ಗ್ರಾಮ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.
ವಿವಿಧ ಇಲಾಖಾ ಅಧಿಕಾರಿಗಳು ಆಗಮಿಸದ ಹಿನ್ನಲೆ ಗ್ರಾಮಸಭೆಯನ್ನು ಮುಂದೂಡಲಾಗಿದೆ.

ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ಕಂದಾಯ ಇಲಾಖೆ, ತೋಟಗಾರಿಕಾ ಇಲಾಖೆ, ಪಶು ಸಂಗೋಪನಾ ಇಲಾಖೆ, ಮೆಸ್ಕಾಂ ಇಲಾಖೆ, ಆರೋಗ್ಯ ಇಲಾಖೆ, ಶಿಶು ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಅಧಿಕಾರಿಗಳನ್ನು ಹೊರತು ಪಡಿಸಿ ಇನ್ನಿತರ ಇಲಾಖಾ ಅಧಿಕಾರಿಗಳು ಆಗಮಿಸದ ಹಿನ್ನಲೆ ಗ್ರಾಮ ಸಭೆಯನ್ನು ಮುಂದೂಡಲಾಗಿದೆ ಎಂದು ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
ವಿವಿಧ ಇಲಾಖಾಧಿಕಾರಿಗಳ ಗೈರು ಹಾಜರಿಯಿಂದ ಗ್ರಾಮ ಪಂಚಾಯತ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು ಗ್ರಾಮಕ್ಕೆ ಬೇಕಾದ ಯಾವುದೇ ಮೂಲ ಸೌಕರ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸದೆ ಇರುವುದರ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿ, ಗ್ರಾಮ ಸಭೆಯನ್ನು ಮುಂದೂಡಲು ಆಗ್ರಹಿಸಿದರು.

























