ಬಂಟ್ವಾಳ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಹಿಳೆಯ ಕುತ್ತಿಗೆಯಲ್ಲಿದ್ದ ಸರವನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಣ್ಣೀರು ಪಂಥ ನಿವಾಸಿ ಇಲ್ಯಾಸ್(26) ಎಂದು ಗುರುತಿಸಲಾಗಿದೆ.
ಇಲ್ಯಾಸ್ ಮೇ.15 ರಂದು ಬೈಕ್ ನಲ್ಲಿ ಬಂದು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಹಂಚಿಕಟ್ಟೆ ಸಾಲು ಮರದ ತಿಮ್ಮಕ್ಕ ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಸರವನ್ನು ಕಳವುಗೈದಿದ್ದ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನ ವಶದಲ್ಲಿದ್ದ 2 ಚಿನ್ನ ಲೇಪಿತ ಬೆಳ್ಳಿಯ ಸರಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕಾರ್ಯಾಚರಣೆಯಲ್ಲಿ ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ಟಿ.ಡಿ ನಾಗರಾಜ್ ಪೊಲೀಸ್ ನಿರೀಕ್ಷಕರು, ಬಂಟ್ವಾಳ ಗ್ರಾಮಾಂತರ ಠಾಣೆ ಪಿ ಎಸ್ ಐ ಹರೀಶ್ ಹಾಗೂ ಅವರ ತಂಡ ಪಾಲ್ಗೊಂಡಿದ್ದರು.

























