ಪುತ್ತೂರು: ನಿನ್ನೆಯಷ್ಟೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ತೆಂಕಿಲ ನರೇಂದ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಮನ್ವಿತಾ ಎಸ್. ರವರು 98.83% ಪಡೆಯುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದು, ರಾಜ್ಯದಲ್ಲಿ 4ನೇ ಸ್ಥಾನ ಪಡೆದಿದ್ದಾರೆ.

ಮನ್ವಿತಾ 593(98.83%) ಅಂಕ ಪಡೆದಿದ್ದಾರೆ.
ಇವರು ರೋಟರಿಪುರ ನಿವಾಸಿ ಸತೀಶ್ ಸುವರ್ಣ ಮತ್ತು ರೇಖಾ ದಂಪತಿಗಳ ಪುತ್ರಿಯಾಗಿದ್ದಾರೆ..
























