ಪುತ್ತೂರು: ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಹಾಗೂ ನ್ಯಾಯವಾದಿಯಾದ ಶೈಲಜಾ ಅಮರನಾಥ್ ರವರು ಹಿಂದೂ ದೇವರಿಗೆ ಅವಮಾನ ಮಾಡಿದ್ದನ್ನು ಶಾಸಕ ಸಂಜೀವ ಮಠಂದೂರು ರವರು ತೀವ್ರವಾಗಿ ಖಂಡಿಸಿದ್ದು, ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತ ಘಟನೆಯಿದಾಗಿದ್ದು, ಇಂತಹ ಹೇಳಿಕೆಗಳನ್ನು ನೀಡುವ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಪ್ರಯತ್ನವನ್ನು ಕಾಂಗ್ರೆಸ್ಸಿಗರು ಮಾಡುತ್ತಿದ್ದಾರೆ ಎಂದು ಹೇಳಿದರು.
ಅಗ್ನಿಯನ್ನು ಪ್ರವೇಶಿಸಿ ತನ್ನ ಪಾವಿತ್ರ್ಯತೆಯನ್ನು ಜಗತ್ತಿಗೆ ಸಾರಿದ ಸೀತಾಮಾತೆಯ ಮತ್ತು ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿಯಾಗಿ ಮಾತಾನಾಡಿದ ಕಾಂಗ್ರೇಸಿನ ನೀಚ ಮನಸ್ಥಿತಿಯನ್ನು ಖಂಡಿಸುತ್ತೇನೆ.
ಅದೇ ರೀತಿ ಕೋಟ್ಯಾಂತರ ಭಕ್ತರ ಭಾವನೆಯನ್ನು ಘಾಸಿಗೊಳಿಸಿದ ಕಾಂಗ್ರೇಸಿಗರಿಗೆ ಇದು ಶಾಪವಾಗಿ ಪರಿಣಮಿಸಲಿದೆ ಎಂದು ಶಾಸಕರು ಹೇಳಿದರು. ಈ ಬಗ್ಗೆ ಪೊಲೀಸ್ ಇಲಾಖೆಗೆ ಶೀಘ್ರವಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಈ ಬಗ್ಗೆ ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಶೈಲಜಾ ಅಮರನಾಥ್ ರವರು ಸಾರ್ವಜನಿಕವಾಗಿ ಕ್ಷಮಾಪಣೆಯನ್ನು ಕೇಳಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ..
 
	    	



























