ಬೆಳ್ತಂಗಡಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯರೂ ಹಾಗೂ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಇದರ ಮಾಜಿ ಅಧ್ಯಕ್ಷ,ರಾಗಿದ್ದ ಹೈದರ್ ನಿರ್ಸಾಲ್ (ಉಜಿರೆ) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಹಲವಾರು ಸಮಾಜ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಇವರು, ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ಪ್ರಧಾನ ಕಾರ್ಯದರ್ಶಿ, ಶಿರ್ಲಾಲು ಮಸೀದಿ ಗೌರವಾಧ್ಯಕ್ಷ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು.
ಹೃದಯಾಘಾತ ಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.



























