ನವದೆಹಲಿ: 2002ರ ಗೋಧ್ರಾ ನಂತರದ ಗಲಭೆಯಲ್ಲಿ ಹತ್ಯೆಗೀಡಾದ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಆಗಿನ ಗುಜರಾತ್ ಸಿಎಂ ಆಗಿದ್ದ ಮೋದಿ ಅವರ ವಿರುದ್ಧ ಪ್ರಕರಣದಲ್ಲಿ ಕೇಂದ್ರದ ವಿಶೇಷ ತನಿಖಾ ತಂಡ ಕ್ಲೀನ್ ಚಿಟ್ ಕೊಟ್ಟಿತ್ತು. ಎಸ್ಐಟಿಯ ಕ್ಲೋಸಿಂಗ್ ರಿಪೋರ್ಟ್ನ್ನು ಪ್ರಶ್ನಿಸಿ ಜಾಫ್ರಿ ಅವರ ಪತ್ನಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ತನಿಖಾ ತಂಡ ನೀಡಿದ್ದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆಗಿನ ಗುಜರಾತ್ ರಾಜ್ಯದ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಗುಜರಾತ್ನಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಇತರಿಗೂ ಕ್ಲೀನ್ ಚಿಟ್ ನೀಡಲಾಗಿದೆ.
ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅವರ ನೇತೃತ್ವದ ಪೀಠವು ಅಹಮದಾಬಾದ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನೀಡಿರುವ ತೀರ್ಪನ್ನು ಎತ್ತಿಹಿಡಿದಿದೆ. ಎಸ್ಐಟಿ ಸಲ್ಲಿಸಿದ ಕ್ಲೋಸಿಂಗ್ ರಿಪೋರ್ಟ್ನ್ನುಅಂಗೀಕರಿಸುವುದರ ವಿರುದ್ಧ ಜಾಫ್ರಿ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿತು.
ಕಾಂಗ್ರೆಸ್ ಸಂಸದರಾಗಿದ್ದ ಝಾಫ್ರಿ ಅವರ ಪತ್ನಿ ಝಾಕಿಯಾ ಅವರ ಮೇಲ್ಮನವಿಯ ಅರ್ಜಿಯು ಅರ್ಹತೆಗಳನ್ನು ಹೊಂದಿಲ್ಲ. ವಜಾಗೊಳಿಸಲು ಅರ್ಹವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
2021 ರ ಡಿಸೆಂಬರ್ನಲ್ಲಿ ಮೇಲ್ಮನವಿ ಆದೇಶ ಕಾಯ್ದಿರಿಸಿದ್ದ ಕೋರ್ಟ್ ಅಕ್ಟೋಬರ್ 5, 2017 ರ ಗುಜರಾತ್ ಹೈಕೋರ್ಟ್ ಕ್ಲೋಸಿಂಗ್ ರಿಪೋರ್ಟ್ ಸ್ವೀಕರಿಸಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿತ್ತು. ಆ ನಂತರ ಝಕಿಯಾ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಸರ್ವೋಚ್ಚ ನ್ಯಾಯಾಲಯವು 2021 ರ ಡಿಸೆಂಬರ್ನಲ್ಲಿ ಮನವಿ ಆಲಿಸಿದ ನಂತರ ಮೇಲ್ಮನವಿಯ ಆದೇಶವನ್ನು ಕಾಯ್ದಿರಿಸಿತ್ತು.

























