ಪುತ್ತೂರು: ರಾಜಸ್ಥಾನದಲ್ಲಿ ಕನ್ನಯ್ಯ ಲಾಲ್ ಎಂಬ ಹಿಂದೂ ಯುವಕನನ್ನು ಹತ್ಯೆ ಮಾಡಿದ ಪ್ರಕರಣವನ್ನು ಖಂಡಿಸಿ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕೆಂದು ಒತ್ತಾಯಿಸಿ, ಪುತ್ತೂರಿನ ದರ್ಬೆ ಸರ್ಕಲ್ ನಲ್ಲಿ ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.


ದರ್ಬೆ ಸರ್ಕಲ್ ನ ರಸ್ತೆಯಲ್ಲಿ ಕುಳಿತುಕೊಂಡು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಹಲವಾರು ಸಂಖ್ಯೆಯಲ್ಲಿ ಸೇರಿರುವ ಕಾರ್ಯಕರ್ತರು ದೊಂದಿಗಳನ್ನು ಹಿಡಿದು, ರಸ್ತೆಯಲ್ಲಿ ಕುಳಿತುಕೊಂಡು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
































