ಪುತ್ತೂರು: ಭಾರೀ ಮಳೆಗೆ ಪುತ್ತೂರಿನ ಹಾರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಂಪೌಂಡ್ ಕುಸಿತಗೊಂಡಿದೆ ಎಂದು ವರದಿಯಾಗಿದೆ.

ಶಾಲಾ ಕಂಪೌಂಡ್ ಕುಸಿತದಿಂದಾಗಿ ಅಂದಾಜು ಸುಮಾರು 15 ಲಕ್ಷ ರೂ. ನಷ್ಟ ಉಂಟಾಗಿದ್ದು, ಹೀಗೆಯೇ ಮಳೆ ಸುರಿದರೆ ಕಟ್ಟಡಕ್ಕೂ ಹಾನಿ ಉಂಟಾಗುವ ಸಂಭವವಿದೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ , ಸ್ಥಳೀಯ ನಗರಸಭಾ ಸದಸ್ಯೆ ಪ್ರೇಮಲತಾ ನಂದಿಲ, ನಗರಸಭಾ ಇಂಜಿನೀಯರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ, ಇಸಿಓ ಹರಿಪ್ರಸಾದ್, ಎಸ್ ಡಿ ಎಂ ಸಿ ಅಧ್ಯಕ್ಷ ಕೃಷ್ಣ ನಾಯ್ಕ್ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




























