ಕಡಬ: ಕೋಡಿಂಬಾಳ ಎಂಬಲ್ಲಿ ಕಳೆದ ವರ್ಷ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ಜಯಾನಂದನ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ ಆರೋಪಿಯನ್ನು ಕೂಡಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕಡಬ ಪೊಲೀಸರಿಗೆ ಆದೇಶಿಸಲಾಗಿತ್ತು. ಆದರೆ ತಲೆಮರೆಸಿಕೊಂಡು ಪರಾರಿಯಾಗಿದ್ದ ಆರೋಪಿ ಜಯಾನಂದ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.
ತನ್ನ ಸ್ವಂತ ನಾದಿನಿ ಮತ್ತು ಅವರ ಪುಟ್ಟ ಮಗುವಿನ ಮೇಲೆ ಆ್ಯಸಿಡ್ ದಾಳಿ ನಡೆಸಿ ಕಾರಾಗೃಹದಲ್ಲಿದ್ದ ಆರೋಪಿ ಜಯಾನಂದನಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿದ್ದು, ಆದರೆ ಈ ಜಾಮೀನನ್ನು ಪ್ರಶ್ನಿಸಿ ಸಂತ್ರಸ್ಥೆ ಮಹಿಳೆ ಹೈಕೋರ್ಟಿನಲ್ಲಿ ಪ್ರಶ್ನಿಸಿ ಜಾಮೀನು ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದರು.
ಈ ಹಿನ್ನೆಲೆಯಲ್ಲಿ ಜಯಾನಂದನ ಜಾಮೀನು ರದ್ದುಗೊಂಡು ಅವರನ್ನು ಕೂಡಲೇ ಬಂಧಿಸುವಂತೆ ನ್ಯಾಯಾಲಯವು ಕಡಬ ಪೊಲೀಸರಿಗೆ ಆದೇಶ ಮಾಡಿತ್ತು. ಈ ಮಧ್ಯೆ ಆರೋಪಿ ಜಯಾನಂದ ತಲೆಮರೆಸಿಕೊಂಡು ಸುಪ್ರೀಂ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದನು. ಆದರೆ ಈ ಅರ್ಜಿಯನ್ನು ಮಾನ್ಯ ನ್ಯಾಯಾಲಯವು ವಜಾಗೊಳಿಸಿದ್ದು, ಇದೀಗ ಜಯಾನಂದ ನ್ಯಾಯಾಲಯಕ್ಕೆ ಶರಣಾಗಿದ್ದು, ಅವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.