ಪುತ್ತೂರು: ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಸರ್ವ ಧರ್ಮದ ಮುಖಂಡರ ಜೊತೆ ಜು.7 ರಂದು ಶಾಂತಿ ಸಭೆ ನಡೆಯಿತು.

ಬಕ್ರೀದ್ ಹಬ್ಬದ ಪ್ರಯುಕ್ತ ಯಾವುದೇ ಧರ್ಮಗಳಿಂದಲೂ ಕಾನೂನಿನ ನೀತಿ-ನಿಯಮ ಉಲ್ಲಂಘನೆಯಾಗದಂತೆ ಮುತುರ್ವಜಿ ವಹಿಸುವಂತೆ ಸಭೆಯಲ್ಲಿ ಸೂಚನೆ ನೀಡಿದರು.
ಗಾಂಜಾ ಪ್ರಕರಣಗಳ ಬಗ್ಗೆ ಹೆಚ್ಚು ನಿಗಾ ವಹಿಸಲು ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿ ಸಾವನ್ನಪ್ಪುವ ಬಗ್ಗೆ, ಇದರ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಎಲ್ಲಾ ಧರ್ಮಗಳ ಮುಖಂಡರು ಉಪಸ್ಥಿತರಿದ್ದರು.

























