ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ವರದಿಯಾಗಿದೆ.


























