ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಹವಾಮಾನ ಇಲಾಖೆ ಜು.11ರ ವರೆಗೆ ರೆಡ್ ಅಲರ್ಟ್ ಮುಂದುವರಿಸಿದೆ.
ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಳೆ ಮುಂದುವರಿದಿದ್ದು, ಇನ್ನೂ ಕೆಲ ದಿನಗಳ ಕಾಲ ಸತತವಾಗಿ ಮಳೆಯಾಗಲಿರುವ ಕಾರಣದಿಂದ ರೆಡ್ ಅಲರ್ಟ್ ಮುಂದುವರಿಸಿದ್ದಾರೆ.
ಕಳೆದ ಒಂದು ವಾರದಿಂದ ಕರಾವಳಿ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಹಲವು ಮನೆಗಳು, ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಕಡಲ್ಕೊರೆತ ಕೂಡ ತೀವ್ರವಾಗಿದ್ದು, ಸಮುದ್ರ ತೀರದ ಜನತೆಯಲ್ಲಿ ಭೀತಿಯನ್ನುಂಟು ಮಾಡಿದೆ.



























